ವಿಜಯಪುರದಲ್ಲಿ ಅಕ್ರಮ ಅಕ್ಕಿ ಸಾಗಣೆ: ಪೊಲೀಸ್ ಮತ್ತು ಆಹಾರ ಇಲಾಖೆಯ ಜಂಟಿ ಕಾರ್ಯಾಚರಣೆ, 210 ಕ್ವಿಂಟಲ್ ಅಕ್ಕಿ ಜಪ್ತು
ವಿಜಯಪುರ: ಅಕ್ರಮವಾಗಿ ಸಾಗಿಸಲಾಗುತ್ತಿದ್ದ 210 ಕ್ವಿಂಟಲ್ ಅಕ್ಕಿಯನ್ನು ಪೊಲೀಸರು ಮತ್ತು ಆಹಾರ ಇಲಾಖೆಯ ಅಧಿಕಾರಿಗಳ ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಈ ಸಾಗಣೆಗೆ ಬಳಸಲಾಗುತ್ತಿದ್ದ ಲಾರಿಯನ್ನೂ ಸೇರಿಸಿ ಒಟ್ಟು 5 ಲಕ್ಷ ರೂಪಾಯಿಗಳ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಥಣಿ ತಾಲೂಕಿನ ಆಜೂರ ಗ್ರಾಮದ ನಿವಾಸಿ ಲಾರಿ ಚಾಲಕ ಗಜಾನನ ಮಕಾಳೆ ಅವರನ್ನು ಇದಕ್ಕೆ ಸಂಬಂಧಿಸಿ ಬಂಧಿಸಲಾಗಿದೆ. ಅಥಣಿಯ ಗಣೇಶವಾಡಿಯ ಮಾರುತಿ ದೊಡಮನಿ ಮತ್ತು ಬೆಳಗಾವಿಯ ಆಜಾದ್ ನಗರದ ಇಟ್ಬಾಲ್ ತಹಶೀಲ್ದಾರ್ ಅವರ ಸೂಚನೆಯ ಮೇರೆಗೆ ಚಾಲಕ ಗಜಾನನ ವಿಜಯಪುರದ ಎಫ್‌ಸಿಐ ರೈಲ್ವೆ ಗೂಡ್ಸ್ ಶೆಡ್ನಿಂದ ಈ ಅಕ್ಕಿಯನ್ನು ಸಾಗಿಸುತ್ತಿದ್ದ ವಿಷಯ ತಿಳಿದುಬಂದಿದೆ.

ಈ ಬಗ್ಗೆ ಸಿಕ್ಕ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, 4.76 ಲಕ್ಷ ರೂಪಾಯಿ ಮೌಲ್ಯದ 210.43 ಕ್ವಿಂಟಲ್ ಅಕ್ಕಿ ಮತ್ತು ಲಾರಿಯನ್ನು ವಶಪಡಿಸಿಕೊಂಡರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಮುಂದಿನ ತನಿಖೆ ನಡೆಯುತ್ತಿದೆ.